ಕಬಿನಿ ಜಲಾಶಯದಲ್ಲಿ ಪ್ರವಾಹ ಹೆಚ್ಚಳ ಹಿನ್ನಲೆ: ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ

Update: 2020-08-04 09:09 GMT
ಸಂಗ್ರಹ ಚಿತ್ರ

ಮೈಸೂರು, ಆ.4: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 20 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುವ ಹಿನ್ನಲೆಯಲ್ಲಿ ಜಲಾನಯನ ಪ್ರದೇಶದ ಮತ್ತು ನದಿ ದಡದ ಎಡ ಬಲ ಇರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

 ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 13 ಸಾವಿರ ಕ್ಯೂಸೆಕ್ಸ್ ಇರುತ್ತದೆ. ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದ್ದು, ಜಲಾಶಯವು ಗರಿಷ್ಠ ಮಟ್ಟ ತಲುಪುವುದರಿಂದ ಆ.4ರಂದು ನದಿಗೆ 20 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಅಸ್ತಿ, ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗಳ ಬಗ್ಗೆ ಮುನ್ನಚ್ಚೆರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಕಬಿನಿ ಕಾಲನಿಯಲ್ಲಿರುವ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರ ಸುಜಾತಾ ಎಸ್. ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News