ಸಿದ್ದರಾಮಯ್ಯರಿಗೆ ಕೊರೋನ ಸೋಂಕು: ಮೈಸೂರು ಜಿಲ್ಲಾ ಪತ್ರಕರ್ತರಲ್ಲಿ ಆತಂಕ

Update: 2020-08-04 11:52 GMT

ಮೈಸೂರು, ಆ.4: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರಲ್ಲಿ ಆತಂಕ ಮನೆ ಮಾಡಿದೆ.

ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಜು.30ರಂದು ಆಯೋಜಿಸಿದ್ದ ಸಂವಾದಕ್ಕೆ ಆಹ್ವಾನಿಸಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ ಪಾಲ್ಗೊಂಡು ಸುದೀರ್ಘವಾಗಿ ಮಾತನಾಡಿದ್ದರು.

ಹಾಗಾಗಿ ಸಂವಾದದಲ್ಲಿ ಭಾಗವಹಿಸಿದ್ದ ಪತ್ರಕರ್ತರು, ಛಾಯಾಗ್ರಾಹಕರಲ್ಲಿ ಆತಂಕ ಶುರುವಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಆಡಿಯೋ ಸಂದೇಶ ರವಾನಿಸಿ, ಸಿದ್ದರಾಮಯ್ಯರ ಸಂವಾದದಲ್ಲಿ ಭಾಗವಹಿಸಿದ್ದ ಪತ್ರಕರ್ತರೆಲ್ಲರೂ ಸೆಲ್ಫ್ ಕ್ವಾರಂಟೈನ್‌ಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಆ.5 ರಂದು ಸ್ಲಾಬ್ ಟೆಸ್ಟ್ ಮಾಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್: ಜು.30 ರಂದು ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಸಂವಾದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗಹಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘವನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಸಂಬಂಧ ಪತ್ರಕರ್ತರ ಭವನದ ಸುತ್ತಾ ಮತ್ತು ಒಳಗಡೆ ಔಷಧಿ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಆ.3ರ ಮಂಗಳವಾರ ನಿಗದಿಯಾಗಿದ್ದ ಎಲ್ಲಾ ಸುದ್ದಿಗೋಷ್ಠಿಗಳನ್ನು ರದ್ದ ಪಡಿಸಲಾಗಿದೆ.

ಸಂವಾದದಲ್ಲಿ ಭಾಗವಹಿಸಿದ್ದ ಪತ್ರಕರ್ತರ ಲಿಸ್ಟ್ ಕಳುಹಿಸಿ ಸಂಘ: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಜು.30ರಂದು ಸಿದ್ದರಾಮಯ್ಯರ ಸಂವಾದದಲ್ಲಿ ಭಾಗವಹಿಸಿದ್ದ ಪತ್ರಕರ್ತರ ಹೆಸರನ್ನು ವಾರ್ತಾ ಇಲಾಖೆಗೆ ಕಳುಹಿಸಿ ಕೊಡಲಾಗಿದೆ. ಸಂವಾದದಲ್ಲಿ ಭಾಗವಹಿಸಿದ್ದ ಪತ್ರಕರ್ತರು, ಛಾಯಾಗ್ರಾಕರ ಹೆಸರನ್ನು ಕಳುಹಿಸಿ ಕೊಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News