ಗುರು ರಾಘವೇಂದ್ರ ಬ್ಯಾಂಕ್ ಹಗರಣ ಪ್ರಕರಣ: ಹಲವು ಕಡೆ ಸಿಐಡಿ ದಾಳಿ

Update: 2020-08-04 13:04 GMT

ಬೆಂಗಳೂರು, ಆ.4: ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಸಹಕಾರ ಬ್ಯಾಂಕ್‍ನಲ್ಲಿ ನಡೆದ ಭಾರಿ ಅವ್ಯವಹಾರ ಪ್ರಕರಣದ ಸಂಬಂಧ ನಗರದ 15 ಕಡೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ನಕಲಿ ದಾಖಲೆ ಸಲ್ಲಿಕೆ ಮಾಡಿ ಸಾಲ ಪಡೆದವರು ಹಾಗೂ ಸಿಬ್ಬಂದಿ, ಅಧಿಕಾರಿಗಳ ಮೇಲೆ ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ ಹದಿನೈದು ಕಡೆಗಳಲ್ಲಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

ಇತ್ತೀಚೆಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿ ತನಿಖೆ ಮುಂದುವರೆಸಿದಾಗ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಮಾಜಿ ಸಿಇಒ ವಾಸುದೇವ್ ಮಯ್ಯ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಡೆತ್ ನೋಟ್‍ನಲ್ಲಿರುವ ಅಂಶ ಹಾಗೂ ಬ್ಯಾಂಕ್ ವಿರುದ್ಧ ಆರೋಪ ಕೇಳಿ ಬಂದು ಎಸಿಬಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಮಾಹಿತಿ ಮೇರೆಗೆ ಇದೀಗ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News