ಆ.5ರಂದು ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ದತ್ತಿ ಇಲಾಖೆ ಸುತ್ತೋಲೆ

Update: 2020-08-04 16:30 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ. 4: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆ.5ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕು ಎಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸೂಚನೆ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದಲ್ಲಿ ಕೋವಿಡ್-19 ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿ ಪಾಲಿಸಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಬೇಕು. ಭೂಮಿಪೂಜೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ(ಆ.5) ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕೆಂದು ಪ್ರಾರ್ಥಿಸಲು ರಾಜ್ಯದ ಜನತೆಯಲ್ಲಿ ಮನವಿ ಮಾಡುತ್ತೇನೆ. ಎಲ್ಲರಿಗೂ ಪ್ರಭು ಶ್ರೀರಾಮಚಂದ್ರ ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News