ಅಯೋಧ್ಯೆ ಶಿಲಾನ್ಯಾಸ : ದ.ಕ. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
Update: 2020-08-04 20:54 IST
ಮಂಗಳೂರು, ಆ.4: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆಂದು ನಡೆಯಲಿರುವ ಭೂಮಿಪೂಜೆ ಹಿನ್ನೆಲೆಯಲ್ಲಿ ಆ.4ರಂದು ಸಂಜೆ 6ಗಂಟೆಯಿಂದ ಆ.6ರಂದು ಬೆಳಗ್ಗೆ 9ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಶಿಲಾನ್ಯಾಸ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಾರ್, ವೈನ್‌ಶಾಪ್ ಮತ್ತು ಸರಕಾರಿ ಮದ್ಯ ಮಳಿಗೆಗಳನ್ನು ಬಂದ್ ಮಾಡಲು ಆದೇಶ ನೀಡಲಾಗಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿದೆ. ಜೊತೆಗೆ ನಿಷೇಧಾಜ್ಞೆ ಇರುವ ಸಮಯದಲ್ಲಿ ಜಿಲ್ಲೆಯ ಎಲ್ಲ ಬಾರ್ ಮತ್ತು ವೈನ್‌ಶಾಪ್ ಮತ್ತು ಸರಕಾರಿ ಮದ್ಯ ಮಳಿಗೆಗಳನ್ನು ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಸೀಲ್‌ಗಳನ್ನು ಕಡ್ಡಾಯವಾಗಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.