×
Ad

ಆ. 5ರಂದು ಶ್ರೀರಾಮಮಂದಿರ ಭೂಮಿ ಪೂಜೆ

Update: 2020-08-04 21:06 IST

ಉಡುಪಿ, ಆ.4: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯುವ ಭೂಮಿ ಪೂಜೆ ಕಾರ್ಯಕ್ರಮ ಸಾಂಗವಾಗಿ ನೆರವೇರುವಂತೆ, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯ ಗಳಲ್ಲಿ ಅರ್ಚಕರುಗಳ ಮೂಲಕ ವಿಶೇಷ ಪೂಜೆ ಮತ್ತು ಪ್ರಾರ್ಥನೆಯನ್ನು (ಕೋವಿಡ್-19 ನಿಯಮ ಪಾಲಿಸಿಕೊಂಡು) ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕದತ್ತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪಿಪಿಸಿಯಲ್ಲಿ: ರಾಮಮಂದಿರದ ಭೂಮಿ ಪೂಜೆ ಅಂಗವಾಗಿ ಉಡುಪಿಯ ಪೂರ್ಣಪ್ರಜ್ಞ ಸಮೂಹ ಸಂಸ್ಥೆಯ ಪರವಾಗಿ ನಾಳೆ ಬೆಳಗ್ಗೆ 10 ಗಂಟೆಗೆ ಪೂರ್ಣಪ್ರಜ್ಞ ಕಾಲೇಜು ವಠಾರದಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಕೋರಲಾಗುತ್ತದೆ. ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀವಿಶ್ವಪ್ರಿಯ ತೀರ್ಥರು ಆಶೀರ್ವಚನ ನೀಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News