ಶಾಸಕ ಜಿ.ಟಿ.ದೇವೇಗೌಡರಿಗೆ ಕೊರೋನ ಸೋಂಕು

Update: 2020-08-05 09:15 GMT

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರಿಗೂ ಕೊರೋನ ಸೋಂಕು ದೃಡಪಟ್ಟಿದೆ.

ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಅವರು, ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದೆ. ನನಗೆ ಕೊರೋನ ಸೋಂಕಿರುವುದು ದೃಢಪಟ್ಟಿದೆ‌. ಸದ್ಯ ಮನೆಯಲ್ಲೇ ಐಸೂಲೇಷನ್ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಕಳೆದ ಏಳು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರೂ ಸಹ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News