×
Ad

ಕಡಬ : ನಕಲಿ ಪಿಸ್ತೂಲ್ ಸಹಿತ ಆರೋಪಿ ಸೆರೆ

Update: 2020-08-05 17:23 IST

ಕಡಬ, ಆ. 5. ಯಾವುದೇ ಪರವಾನಗಿ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿರುವ ಕಡಬ ಪೊಲೀಸರು, ಎರಡು ಪಿಸ್ತೂಲು, 2 ಖಾಲಿ ತೋಟೆ, ರಂಜಕ ಹಾಗೂ ಪೊಟಾಶಿಯಂನ್ನು ವಶಪಡಿಸಿಕೊಂಡಿದ್ದಾರೆ‌.

ಬಂಧಿತ ಆರೋಪಿಯನ್ನು ಕಡಬ ಗ್ರಾಮದ ಪಾಲೋಳಿ ನಿವಾಸಿ ಜನಾರ್ಧನ್ ಗೌಡ ಎಂದು ಗುರುತಿಸಲಾಗಿದೆ.

ಆರೋಪಿಯು ಯಾವುದೇ ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆರೋಪಿಯ ಮನೆಯ ಮೇಲೆ ದಾಳಿ ಮಾಡಿ 2 ನಕಲಿ ಪಿಸ್ತೂಲ್ ಗಳನ್ನು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News