ಪರಿಶಿಷ್ಟ ಜಾತಿ, ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ

Update: 2020-08-05 12:35 GMT

ಉಡುಪಿ, ಆ.5: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತಕ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಯಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತಾರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅರ್ಹ ಕ್ರೀಡಾಪಟುಗಳು -https://karunadu.karnataka.gov.in/dyes- ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆ. 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 94808-86467) ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News