ಸಿದ್ದರಾಮಯ್ಯ ಕುರಿತು ಅವಹೇಳನಕಾರಿ ಬರಹ: ಕ್ರಮಕ್ಕೆ ಆಗ್ರಹಿಸಿ ದೂರು ಸಲ್ಲಿಸಿದ ಕಾಂಗ್ರೆಸ್

Update: 2020-08-05 15:53 GMT

ಬೆಂಗಳೂರು, ಆ.5: ಕೋವಿಡ್-19 ಸೋಂಕು ತಗುಲಿರುವ ಕಾರಣದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಕಾರಿ ಬರಹ ಪ್ರಕಟಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಪಿಸಿಸಿ ಕಾನೂನು ಘಟಕದಿಂದ ನಗರ ಪೊಲೀಸರಿಗೆ ದೂರು ನೀಡಲಾಗಿದೆ.

ಕಾನೂನು ಘಟಕದಿಂದ ವಕೀಲ ಸೂರ್ಯ ಮುಕುಂದರಾಜ್ ಅವರು ಇಲ್ಲಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯ ಮಾಡಿದ್ದಾರೆ.

ಕೋವಿಡ್-19 ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದು, ಈ ವೇಳೆ ಉದ್ದೇಶ ಪೂರಕವಾಗಿ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಮತ್ತು ಅವಹೇಳನಕಾರಿಯಾಗಿ ಬರಹಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದು, ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ ಪೊಲೀಸರು  ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News