ಭಾರೀ ಮಳೆಯ ಮುನ್ಸೂಚನೆ: ಉಡುಪಿಯಲ್ಲಿ ರೆಡ್ ‌ಅಲರ್ಟ್

Update: 2020-08-05 16:07 GMT

ಉಡುಪಿ, ಆ. 5: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ. ಇದರಿಂದ ಆ.6, 9 ಹಾಗೂ 10ರಂದು ಉಡುಪಿ ಜಿಲ್ಲೆಯಾದ್ಯಂತ ಕೆಂಪು ಅಲರ್ಟ್‌ನ್ನು ಘೋಷಿಸಲಾಗಿದೆ.

ಅಲ್ಲದೇ ಆ. 7 ಮತ್ತು 8ರಂದು ಆರೆಂಜ್ ಅಲರ್ಟ್‌ನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿ.ಜಗದೀಶ್ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ಗಳನ್ನು ನೀಡಿದೆ. ಜನರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ, ಮಕ್ಕಳು, ಸಾರ್ವಜನಿಕರು ಅಪಾಯತರುವ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳದಲ್ಲಿರುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News