ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತು ವಿಚಾರಿಸಿ ಮುಖ್ಯಮಂತ್ರಿ

Update: 2020-08-05 16:09 GMT

ಉಡುಪಿ, ಆ. 5: ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಂಭಸಿರುವ ಹಾನಿ ಮತ್ತು ಪ್ರಸ್ತುತ ಸ್ಥಿತಿಗತಿಯ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು , ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಬುಧವಾರ ಸಂಜೆ ದೂರವಾಣಿಯಲ್ಲಿ ಮಾಹಿತಿ ಪಡೆದರು.

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಸಂಭಸಿರುವ ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾನಿ, ಜೀವ ಹಾನಿಯ ಕುರಿತು ಜಿಲ್ಲಾಧಿಕಾರಿಯಿಂದ ವಿವರವಾದ ಮಾಹಿತಿ ಪಡೆದ ಮುಖ್ಯಮಂತ್ರಿ, ಮಳೆಯಿಂದ ಹಾನಿಗೊಳಗಾ ದವರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಯಾವುದೇ ತುರ್ತು ನೆರವಿನ ಅಗತ್ಯವಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಮಳೆಯಿಂದ ಹಾನಿಯಾದವರಿಗೆ ಶೀಘ್ರದಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ. ಹಣಕಾಸಿನ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮುಖ್ಯಮಂತ್ರಿಗೆ ತಿಳಿಸಿದರು. ಜಿಲ್ಲೆಯ ಮಳೆ ಪರಿಸ್ಥಿತಿ ಕುರಿತಂತೆ ರಾಜ್ಯದ ಕಂದಾಯ ಸಚಿವ ಅಶೋಕ್ ಅವರೂ ಸಹ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News