ಬೆಂಗಳೂರು: ರೌಡಿ ಕಾಲಿಗೆ ಗುಂಡೇಟು

Update: 2020-08-05 16:39 GMT

ಬೆಂಗಳೂರು, ಆ.5: ಗಂಭೀರ ಅಪರಾಧ ಆರೋಪ ಹೊತ್ತಿದ್ದ ರೌಡಿಯೋರ್ವನ ಕಾಲಿಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸುವಲ್ಲಿ ಇಲ್ಲಿನ ನಗರದ ಪೂರ್ವ ವಿಭಾಗದ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ನಿವಾಸಿ ಅನೀಸ್ ಅಹ್ಮದ್(32) ಎಂಬಾತ ಬಂಧಿತ ರೌಡಿಯಾಗಿದ್ದು, ಪೊಲೀಸರ ಗುಂಡೇಟಿನಿಂದ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.

ಬಂಧಿತನ ವಿರುದ್ಧ ಪೂರ್ವ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ, ಕೊಲೆ ಯತ್ನ, ಡಕಾಯಿತಿ ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿ ಅನೀಸ್ ಅಹ್ಮದ್, ಬುಧವಾರ ಇಲ್ಲಿನ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಬಗ್ಗೆ ಮಾಹಿತಿ ಮೇರೆಗೆ ಬಂಧಿಸಲು ಕೆ.ಜಿ ಹಳ್ಳಿ ಠಾಣಾ ಇನ್ಸ್‍ಪೆಕ್ಟರ್ ಅಜಯ್ ಸಾರಥಿ ತೆರಳಿದಾಗ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ತದನಂತರ ಆರೋಪಿಯು ಇಬ್ಬರು ಪೊಲಿಸರನ್ನು ಗಾಯಗೊಳಿಸಿದ್ದು, ತಕ್ಷಣ ಎಚ್ಚೆತ್ತ ಇನ್ಸ್‍ಪೆಕ್ಟರ್ ಆತ್ಮರಕ್ಷಣೆಗೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ,  ಆರೋಪಿ ಹಲ್ಲೆಗೆ ಮುಂದಾದ ವೇಳೆ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News