ಸ್ವಾತಂತ್ರ ದಿನದಂದು ದೈಹಿಕ ಅಂತರ ಕಡ್ಡಾಯ: ದ.ಕ. ಡಿಸಿ

Update: 2020-08-05 17:09 GMT

ಮಂಗಳೂರು, ಆ.5: ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೈಹಿಕ ಅಂತರ, ಸುರಕ್ಷಿತ ಅಂತರ ಮತ್ತು ಮಾಸ್ಕ್ ಕಡ್ಡಾಯ ಬಳಕೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸ್ವಾತಂತ್ರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ ಧ್ವಜಾರೋಹಣ ನಡೆಯಲಿದ್ದು, ಈ ಸಂದರ್ಭ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಇರುವು ದಿಲ್ಲ. ಸ್ವಾತಂತ್ರ ದಿನಾಚರಣೆಯನ್ನು ಸಾರ್ವಜನಿಕರ ವೀಕ್ಷಣೆಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ನಗರದ ಮುಖ್ಯ ವೃತ್ತದಲ್ಲಿ ಡಿಜಿಟಲ್ ಪರದೆಯನ್ನು ಅಳವಡಿಸಿ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜನ ಸಾಮಾನ್ಯರು ತಮ್ಮ ದೇಶಭಕ್ತಿಯನ್ನು ಮನೆಯಲ್ಲಿ ಇದ್ದು ವ್ಯಕ್ತಪಡಿಸಬೇಕು ಎಂದು ಹೇಳಿದರು.

ಈ ಸ್ವಾತಂತ್ರ ದಿನಾಚರಣೆಯಲ್ಲಿ ವಿಶೇಷವಾಗಿ ಕೊರೋನ ಸಂದರ್ಭ ಉತ್ತಮ ಕೆಲಸ ನಿರ್ವಹಿಸಿದ ಪೌರ ಕಾರ್ಮಿಕರು, ಆಶಾ ಕಾರ್ಯಕತೆ ಯರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು, ವೈದ್ಯರ ಸೇವೆಯನ್ನು ಗುರುತಿಸಿ ಅವರಿಗೆ ಸಮ್ಮಾನ ಮಾಡುವ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿಕೊಂಡಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News