ಕೇರಳ ಚಿನ್ನ ಅಕ್ರಮ ಸಾಗಾಟ ಪ್ರಕರಣ: ಸ್ವಪ್ನಾ ಸುರೇಶ್, ಇತರ ಇಬ್ಬರು ಈಡಿ ಕಸ್ಟಡಿಗೆ

Update: 2020-08-05 18:49 GMT

ತಿರುವನಂತಪುರ, ಆ. 5: ಕೇರಳ ಚಿನ್ನ ಸಾಗಾಟ-ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನ ಆರೋಪಿ ಸ್ವಪ್ನಾ ಸುರೇಶ್ ಸಹಿತ ಮೂವರನ್ನು ಜಾರಿ ನಿರ್ದೇಶನಾಲಯ ಬುಧವಾರ ವಶಕ್ಕೆ ತೆಗೆದುಕೊಂಡಿದೆ.

ಜಾರಿ ನಿರ್ದೇಶನಾಲಯ ತಿರುವನಂತಪುರದಲ್ಲಿರುವ ವಿಶೇಷ ಎನ್‌ಐಎ ನ್ಯಾಯಾಲಯದಿಂದ ಈ ಮೂವರನ್ನು ವಶಕ್ಕೆ ಪಡೆದುಕೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಎನ್‌ಐಎಯಿಂದ ಬಂಧಿತರಾಗಿದ್ದ ಸರಿತಾ ಪಿ.ಎಸ್., ಸ್ವಪ್ನಾ ಸುರೇಶ್ ಹಾಗೂ ಸಂದೀಪ್ ನಾಯರ್ ಅನ್ನು ಜಾರಿ ನಿರ್ದೇಶನಾಲಯ ತನ್ನ ವಶಕ್ಕೆ ಪಡೆದುಕೊಂಡಿತು ಎಂದು ಅವರು ತಿಳಿಸಿದ್ದಾರೆ.

ಮೂವರ ವಿಚಾರಣೆ ನಡೆಸಲಾಗಿದೆ ಹಾಗೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಹೇಳಿಕೆಗಳನ್ನು ದಾಖಲಿಸಲಾಗಿದೆ ಅವರು ಹೇಳಿದ್ದಾರೆ. ಎನ್‌ಐಎಯ ಎಫ್‌ಐಆರ್ ಅನ್ನು ಅಧ್ಯಯನ ನಡೆಸಿದ ಬಳಿಕ ರಾಜತಾಂತ್ರಿಕ ಪಾರ್ಸಲ್ ಬಳಸಿ ಚಿನ್ನ ಸಾಗಾಟ ಮಾಡಿದ ಕುರಿತು ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಕಳೆದ ತಿಂಗಳು ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News