ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ಆರೋಪ: ಆರೋಪಿ ಪೊಲೀಸ್ ವಶಕ್ಕೆ

Update: 2020-08-06 08:02 GMT

ಶಿವಮೊಗ್ಗ, ಆ.6: ದಾಖಲೆ ಇಲ್ಲದೇ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದು, ಈತನಿಂದ 38 ಲಕ್ಷ ರೂ. ಮತ್ತು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಯ್ಯದ್ ಆಸಿಫ್(42) ಬಂಧಿತ ಆರೋಪಿ. ಸಾಗರ ಇಂದಿರಾ ಗಾಂಧಿ ಕಾಲೇಜು ಬಳಿ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ , ಕಾರನ್ನು ತಡೆದು ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ದಾಖಲೆ ಇಲ್ಲ ಎಂದು ಆರೋಪಿ ತಿಳಿಸಿದ್ದರಿಂದ ಬಂಧಿಸಿ, ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆದುಕೊಂಡಿರುವಿದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸಾಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News