ಚಿಕ್ಕಮಗಳೂರು: ಗುರುವಾರ 60 ಮಂದಿಗೆ ಕೊರೋನ ಸೋಂಕು ದೃಢ

Update: 2020-08-06 12:03 GMT

ಚಿಕ್ಕಮಗಳೂರು,ಆ.6: ಜಿಲ್ಲೆಯಲ್ಲಿ ಗುರುವಾರ 60 ಮಂದಿಯಲ್ಲಿ ಕೊರೋನ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ತಿಳಿದು ಬಂದಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದ 31 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಗುರುವಾರ ದೃಢಪಟ್ಟಿರುವ 60 ಪ್ರಕರಣಗಳ ಪೈಕಿ ಚಿಕ್ಕಮಗಳೂರು ತಾಲೂಕಿನಲ್ಲಿ 19 ಪ್ರಕರಣಗಳು ವರದಿಯಾಗಿದ್ದರೆ, ಕಡೂರು ತಾಲೂಕಿನಲ್ಲಿ 17 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಅಜ್ಜಂಪುರ 9, ತರೀಕೆರೆ 8, ಮೂಡಿಗೆರೆ 3, ಕೊಪ್ಪ 2 ಹಾಗೂ ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳಲ್ಲಿ ತಲಾ 1 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಸೋಂಕಿತರ ಪೈಕಿ ಕೆಲವರನ್ನು ನಗರದ ವಿವಿಧ ಕೊರೋನ ಚಿಕಿತ್ಸಾ ಘಟಕಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನು ಕೆಲವರನ್ನು ಹೋಂ ಐಸೋಲೇಶನ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕಗಳ ಪತ್ತೆ ಕಾರ್ಯಕ್ಕೆ ಜಿಲ್ಲಾಡಳಿತ ಕ್ರಮವಹಿಸಿದೆ.

ಗುರುವಾರ ವರದಿಯಾದ 60 ಪಾಸಿಟಿವ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 1,303 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಗುರುವಾರ ಸೋಂಕಿನಿಂದ ಗುಣಮುಖರಾದ 31 ಮಂದಿ ಸೇರಿದಂತೆ ಇದುವರೆಗೂ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 547ಕ್ಕೇರಿದೆ. ಸೋಂಕಿಗೆ ತುತ್ತಾಗಿದ್ದ 25 ಮಂದಿ ಜಿಲ್ಲೆಯಲ್ಲಿ ಇದುವರೆಗೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News