ಜ್ವರ, ಕೆಮ್ಮು, ನೆಗಡಿ ಲಕ್ಷಣಗಳಿದ್ದರೆ ಸಹಾಯವಾಣಿ ಸಂಪರ್ಕಿಸಿ: ಡಾ.ಸುಧಾಕರ್

Update: 2020-08-06 12:43 GMT

ಬೆಂಗಳೂರು, ಆ. 6: `ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನರು ಅತ್ಯಂತ ಜಾಗೃತೆ ವಹಿಸಬೇಕು. ಜ್ವರ, ಕೆಮ್ಮು, ನೆಗಡಿ, ಶೀತ ಮತ್ತಿತರೇ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಆರೋಗ್ಯ ಇಲಾಖೆ ಸಹಾಯ ವಾಣಿಗೆ ಕರೆ ಮಾಡಬೇಕು' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಸಲಹೆ ಮಾಡಿದ್ದಾರೆ.

ಗುರುವಾರ ಟ್ವೀಟ್ ಮಾಡಿರುವ ಅವರು, ವರುಣನ ಕೃಪೆಯಿಂದ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಕೊರೋನ ಸೋಂಕಿನ ಮಧ್ಯೆ ಮಳೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಳೆಯ ಹಿನ್ನೆಲೆಯಲ್ಲಿ ಜ್ವರ, ಕೆಮ್ಮು, ನೆಗಡಿ, ಶೀತ ಮತ್ತಿತರೇ ರೋಗಗಳು ಸಾಮಾನ್ಯ. ಹೀಗಾಗಿ ಸಾರ್ವಜನಿಕರು ಮೇಲ್ಕಂಡ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ಚಿಕಿತ್ಸೆಗೆ ಸೂಕ್ತ ಸಲಹೆ ಪಡೆದುಕೊಳ್ಳಬಹುದು ಎಂದು ಡಾ.ಸುಧಾಕರ್ ಇದೇ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News