ಆನ್‍ಲೈನ್ ಮೂಲಕ ಸಂಪರ್ಕ ತರಗತಿ ಪ್ರಾರಂಭ

Update: 2020-08-06 12:58 GMT

ರಾಮನಗರ, ಆ.6: 2019-20ನೆ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದಿರುವ ತೃತೀಯ ಬಿ.ಎ.ವಿದ್ಯಾರ್ಥಿಗಳಿಗೆ ಆ.5 ಹಾಗೂ ತೃತೀಯ ಬಿ.ಕಾಂ ವಿದ್ಯಾರ್ಥಿಗಳಿಗೆ ಆ.10 ರಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆನ್‍ಲೈನ್ ಮುಖಾಂತರ ಸಂಪರ್ಕ ತರಗತಿಗಳನ್ನು ಆಯೋಜಿಸಿದ್ದು, ಈ ಬಗ್ಗೆ ಈಗಾಗಲೇ ಎಲ್ಲ ವಿದ್ಯಾರ್ಥಿಗಳ ಸಂಚಾರಿ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ರವಾನಿಸಲಾಗಿದೆ.

ತರಗತಿಗಳ ವೇಳಾಪಟ್ಟಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವೆಬ್‍ಸೈಟ್ www.ksoumysuru.ac.in ಹಾಗೂ Student Application ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ವೆಬ್‍ಸೈಟ್‍ನಲ್ಲಿ ಪ್ರಸಾರವಾಗುವ ತರಗತಿಗಳನ್ನು ಕೇಳಬಹುದು ಮತ್ತು ವೀಕ್ಷಿಸಬಹುದು. ಇದರ ಸದುಪಯೋಗವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆಯಬೇಕೆಂದು ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ರಾಮನಗರ ಪ್ರಾದೇಶಿಕ ಕೇಂದ್ರದ ದೂರವಾಣಿ ಸಂಖ್ಯೆ: 9986458055, 8861732487, 8660460261 ಮತ್ತು 9743184848 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News