ವಿಜಯ್ ಮಲ್ಯ ಪುನರ್ ಪರಿಶೀಲನಾ ಅರ್ಜಿ ವಿಚಾರಣೆಯನ್ನು ಆ. 20ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

Update: 2020-08-06 14:55 GMT

ಹೊಸದಿಲ್ಲಿ, ಅ. 6: ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಸಲ್ಲಿಸಿದ ಮರು ಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಆಗಸ್ಟ್ 20ಕ್ಕೆ ಮುಂದೂಡಿದೆ. ತನ್ನ ಮೂವರು ಮಕ್ಕಳಿಗೆ ಹಣ ವರ್ಗಾವಣೆ ಮಾಡಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವ ಮೂಲಕ ತಪ್ಪೆಸೆಗಿರುವ ಬಗ್ಗೆ ನೀಡಿದ ಮೇ 17ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ವಿಜಯ್ ಮಲ್ಯ ಸುಪ್ರೀಂ ಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

 ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ 40 ದಶಲಕ್ಷ ಅಮೆರಿಕ ಡಾಲರ್ ಅನ್ನು ತನ್ನ ಮಕ್ಕಳಿಗೆ ವರ್ಗಾಯಿಸುವ ಮೂಲಕ ವಿಜಯ್ ಮಲ್ಯ ನ್ಯಾಯಾಂಗ ನಿಂದನೆ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ 2017ರಲ್ಲಿ ಪ್ರತಿಪಾದಿಸಿತ್ತು. ಈ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಾದಿಸಲು ತನ್ನ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ವಿಜಯ್ ಮಲ್ಯನಿಗೆ ನಿರ್ದೇಶಿಸಿತ್ತು. ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಭೂಷಣ್ ಅವರನ್ನು ಒಳಗೊಂಡ ಪೀಠ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಪ್ರಕರಣವನ್ನು ಆಗಸ್ಟ್ 20ಕ್ಕೆ ಮುಂದೂಡಿತು. ಮಲ್ಯ ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಇದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News