ಸಮುದ್ರಕ್ಕೆ ಇಳಿಯದಂತೆ ಕರಾವಳಿಯ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ

Update: 2020-08-06 15:24 GMT

ಉಡುಪಿ, ಆ. 6: ಮಂಗಳೂರಿನಿಂದ ಕಾರವಾರದವರೆಗಿನ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಆ.7ರ ರಾತ್ರಿ 11:30ರವರೆಗೆ ಬಲವಾದ ಗಾಳಿ ಬೀಸಲಿದ್ದು, ಇದರಿಂದ ಅರಬಿಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ದಡವನ್ನು ಅಪ್ಪಳಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 50ರಿಂದ 60ಕಿ.ಮೀ. ವೇಗದ ಗಾಳಿ ಬೀಸುವ ಸಂಭವವಿದ್ದು, ಇದರಿಂದ 3.5ರಿಂದ 5.7ಮಿ. ಎತ್ತರದ ಅಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಅದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News