ಮಳೆ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಸಿಎಂ ಸೂಚನೆ

Update: 2020-08-06 16:41 GMT

ಬೆಂಗಳೂರು, ಆ.6: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದಿನ ರೀತಿಯೇ ಪರಿಹಾರ ನೀಡಬೇಕು ಅಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು ಎಂದು ತಿಳಿಸಿದ್ದಾರೆ.

ಈಗಾಗಲೆ ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ-ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿರುವುದರಿಂದ ಹಳ್ಳಿಗಳಲ್ಲಿರುವ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳನ್ನಾಗಿಸಿ, ಅಲ್ಲಿ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸರ್ವೆ ಮಾಡಿ ವರದಿ ಕೊಡಬೇಕು, ಪ್ರತಿದಿನ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News