ನಿಷೇಧಾಜ್ಞೆಯ ವೇಳೆ ವಿಜಯೋತ್ಸವ: ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Update: 2020-08-06 17:53 GMT

ಮಂಗಳೂರು, ಆ.6: ಅಯೋಧ್ಯೆಯ ಬಾಬರಿ ಮಸೀದಿಯ ಭೂಮಿಯಲ್ಲಿ ಶ್ರೀರಾಮಮಂದಿರಕ್ಕೆ ಬುಧವಾರ ಶಿಲಾನ್ಯಾಸ ನಡೆಸಿದ ಸಂದರ್ಭ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.144 ಜಾರಿಗೊಳಿಸಿದ್ದರೂ ಕೂಡ ಕಾನೂನಿಗೆ ಬೆಲೆ ಕೊಡದೆ ವಿಜಯೋತ್ಸವ ಆಚರಿಸಿದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಎಸ್‌ಡಿಪಿಐ ಆಗ್ರಹಿಸಿದೆ.

ಯಾವುದೇ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ವಿಜಯೋತ್ಸವ ಮತ್ತು ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಸೂಚನೆ ನೀಡಿತ್ತು. ಆದರೆ ಇದನ್ನೆಲ್ಲಾ ನಿರ್ಲಕ್ಷ್ಯಿಸಿ ಕಾನೂನನ್ನು ಕೈಗೆತ್ತಿಕೊಂಡ ಸಂಘಪರಿವಾರ ಜಿಲ್ಲೆಯ ಹಲವು ಕಡೆಗಳಲ್ಲಿ ಪಟಾಕಿ ಸಿಡಿಸಿಕೊಂಡು ವಿಜಯೋತ್ಸವ ಆಚರಿಸಿ ಪೊಲೀಸ್ ಇಲಾಖೆಗೆ ಮತ್ತು ಕಾನೂನಿಗೆ ಬೆಲೆ ನೀಡದೆ ವರ್ತಿಸಿದೆ. ಇದಕ್ಕೆ ಮೌನ ಸಮ್ಮತಿ ನೀಡಿದ ಪೊಲೀಸ್ ಇಲಾಖೆಯ ದ್ವಿಮುಖ ಧೋರಣೆ ಖಂಡನಾರ್ಹ. ಆದ್ದರಿಂದ ಕಾನೂನು ಬಾಹಿರವಾಗಿ ವಿಜಯೋತ್ಸವ ಆಚರಿಸಿದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾದ್ಯಕ್ಷ ಅಥಾವುಲ್ಲಾ ಜೋಕಟ್ಟೆ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News