ರಾಜ್ಯ ಸರಕಾರ ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧವಾಗಿದೆ: ಬಿ.ಶ್ರೀರಾಮುಲು

Update: 2020-08-06 18:51 GMT

ಬೆಂಗಳೂರು, ಆ.6: ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಎಲ್ಲ ಭಾಗದ ಜನರು ಮುಂಜಾಗ್ರತೆಯಿಂದ ಇರಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್ ಸವಾಲಿನ ಸಮಯದಲ್ಲಿ ರಾಜ್ಯಕ್ಕೆ ನೆರೆ ರೂಪದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ. ಆದರೆ ಯಾರೂ ಹೆದರಬೇಕಿಲ್ಲ. ರಾಜ್ಯ ಸರಕಾರದ ಈ ಪ್ರಕೃತಿ ವಿಕೋಪವನ್ನು ಎದುರಿಸಲು ಸರ್ವ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಪರಿಹಾರ ಕಾರ್ಯಗಳಿಗೆ ಈಗಾಗಲೆ 50 ಕೋಟಿ ರೂ.ಗಳನ್ನು ಸರಕಾರ ಬಿಡುಗಡೆ ಮಾಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಮೊತ್ತ ಬಿಡುಗಡೆ ಮಾಡಲಿದೆ. ಜನತೆಯ ಸುರಕ್ಷತೆಯೇ ನಮ್ಮ ಸರಕಾರದ ಪ್ರಥಮ ಆದ್ಯತೆ ಎಂದು ಶ್ರೀರಾಮುಲು ಹೇಳಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News