ರಾಯಚೂರು: ತಾಯಿಯನ್ನು ನೋಡಿಕೊಳ್ಳದ ಹಿನ್ನೆಲೆ; ಪಿತ್ರಾರ್ಜಿತ ಆಸ್ತಿ ವಾಪಸ್ಸಿಗೆ ಕೋರ್ಟ್ ಆದೇಶ

Update: 2020-08-07 13:37 GMT

ರಾಯಚೂರು, ಆ.7: ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಹಿನ್ನೆಲೆಯಲ್ಲಿ ಪಿತ್ರಾರ್ಜಿತ ಆಸ್ತಿಯನ್ನು ಮತ್ತೆ ತಾಯಿಯ ಹೆಸರಿಗೆ ವರ್ಗಾಯಿಸುವಂತೆ ರಾಯಚೂರು ಉಪ ವಿಭಾಗಾಧಿಕಾರಿ ನ್ಯಾಯಾಲಯ ಆದೇಶಿಸಿದೆ.

ನನ್ನ ಮಗ ಹುಸೇನ್‍ಬಾಷಾ ಪಿತ್ರಾರ್ಜಿತವಾಗಿ ಬಂದಿದ್ದ 3 ಎಕರೆ 28 ಗುಂಟೆ ಜಮೀನನ್ನು ತನ್ನ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾನೆ ಎಂದು ಸಿರವಾರ ತಾಲೂಕು ಕವಿತಾಳದ ಕತೇಜಾ ಬೇಗಂ ಅವರು ಉಪ ವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯಲ್ಲಿ ನನ್ನ ಮಗ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಸರಿಯಾಗಿ ಊಟವನ್ನೂ ಹಾಕುತ್ತಿಲ್ಲ. ಪಿತ್ರಾರ್ಜಿತ ಜಮೀನನ್ನು ನನ್ನ ಹೆಸರಿಗೆ ವರ್ಗಾಯಿಸಬೇಕೆಂದು ಮನವಿ ಮಾಡಿಕೊಂಡಿದ್ದರು. 

ಅರ್ಜಿಯ ವಿಚಾರಣೆ ನಡೆಸಿದ ಉಪವಿಭಾಗಾಧಿಕಾರಿ ಅವರು, ಪಾಲಕರ ಪೋಷಣೆ, ಸಂರಕ್ಷಣೆ, ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ-2007ರ ಅಡಿಯಲ್ಲಿ ಆಸ್ತಿ ನೋಂದಣಿಯನ್ನು ರದ್ದುಗೊಳಿಸಿ ತಾಯಿ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News