ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಆಯುಕ್ತರ ಸಭೆ

Update: 2020-08-07 13:42 GMT

ಬೆಂಗಳೂರು, ಆ.7: ಕ್ವಾರಂಟೈನ್ ಪ್ರಕ್ರಿಯೆ ಮುಗಿಸಿ ಕರ್ತವ್ಯಕ್ಕೆ ಹಾಜರಾದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಶುಕ್ರವಾರ ನಗರದ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅವರು, ಬೆಂಗಳೂರು ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ಕ್ರಮಗಳು. ಹೆಚ್ಚುತ್ತಿರುವ ಮಳೆ ಹಾಗೂ ಕೊರೋನ ಸೋಂಕು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಸೇರಿದಂತೆ ಇನ್ನಿತರೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಾರ್ಯ ನಿರ್ವಹಿಸಿದ್ದಾರೆ ಎಂದರು.

ಆಯುಕ್ತರ ವರದಿ ನೆಗಟಿವ್ 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News