ಅಗ್ನಿಶಾಮಕ ದಳಕ್ಕೆ 20 ಕೋಟಿ ರೂ. ಬಿಡುಗಡೆ: ಆರ್.ಅಶೋಕ್

Update: 2020-08-07 15:07 GMT

ಪಡುಬಿದ್ರಿ, ಆ.7: ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ತುರ್ತು ಕಾರ್ಯಾ ಚರಣೆಗೆ ಬೇಕಾದ ಅಗತ್ಯ ಪರಿಕರಗಳನ್ನು ಖರೀದಿಸಲು ರಾಜ್ಯ ಅಗ್ನಿಶಾಮಕ ದಳಕ್ಕೆ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಡಲ್ಕೊರೆತದಿಂದ ಹಾನಿಗೊಳಗಾದ ಪಡುಬಿದ್ರಿ ಬೀಚ್‌ಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತ ನಾಡುತಿದ್ದರು. ಪ್ರಾಕೃತಿಕ ವಿಕೋಪ ಪರಿಹಾರಕ್ಕೆ ಸಂಬಂಧಿಸಿ ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದೆ. ಪೊಲೀಸ್, ಕಂದಾಯ ಹಾಗೂ ಅಗ್ನಿಶಮಕ ದಳದವರಿಗೆ ರಜೆ ಮಾಡದೆ ಕೆಲಸ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಪ್ರಾಕೃತಿಕ ವಿಕೋಪ ಪುನರ್ವಸತಿ ಭವನ ನಿರ್ಮಾಣಕ್ಕೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಥಳ ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಗದೀಶ್, ಎಸ್ಪಿ ವಿಷ್ಣುವರ್ಧನ್, ತಹಸೀಲ್ದಾರ್ ಮುಹಮ್ಮದ್ ಇಸ್ಹಾಕ್, ಕುಂದಾಪುರ ಎಸಿ ರಾಜು ಕೆ., ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಡಿವೈಎಸ್ಪಿ ಜೈಶಂಕರ್, ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಆರ್‌ಐ ರವಿ ಶಂಕರ್, ವಿಎ ಶ್ಯಾಮ್ ಉಪಸ್ಥಿತರಿದ್ದರು.

ಪಡುಬಿದ್ರಿ ಬೀಚ್‌ನಲ್ಲಿ ಶಾಶ್ವತ ತಡೆಗೋಡೆ

ರಾಷ್ಟ್ರೀಯ ವಿಪತ್ತು ನಿಧಿಗೆ ಕೇಂದ್ರ ಸರಕಾರ ಪ್ರತಿ ವರ್ಷ 110 ಕೋಟಿ ರೂ. ನೀಡುತ್ತಿದ್ದು, ಈ ಬಾರಿ ಮಾತ್ರ 300 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

ಸಮುದ್ರ ಕೊರತೆಯಿಂದ ಪಡುಬಿದ್ರಿ ಬೀಚ್ ಸಂಪೂರ್ಣ ಹಾನಿಯಾಗಿದೆ. ಸಾಗರ್ ವಿದ್ಯಾಮಂದಿರ ಮುಂಭಾಗ 50 ಮೀಟರ್ ಶಾಶ್ವತ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಮಾಡಲು ರಾಷ್ಟ್ರೀಯ ವಿಪತ್ತು ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕಾಮಗಾರಿ ಆರಂಭಿಸಲು ಕ್ರಿಯಾ ಯೋಜನೆ ತಯಾರಿಸಿ ಕಳುಹಿಸುವಂತೆ ಜಿಲ್ಲಾಧಿಾರಿಗೆ ಸೂಚನೆ ನೀಡಿ ದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News