ಚಿಕ್ಕಮಗಳೂರು ಜಿಲ್ಲೆಯಲ್ಲಿ 64 ಮಂದಿಗೆ ಕೊರೋನ ಸೋಂಕು ದೃಢ

Update: 2020-08-07 16:03 GMT

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ 64 ಮಂದಿಗೆ ಕೊರೋನ ಸೋಂಕು ತಗುಲಿರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ. ಚಿಕ್ಕಮಗಳೂರು ತಾಲ್ಲೂಕಿನಲ್ಲಿ 24 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 22 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 1, ಅಜ್ಜಂಪುರ ತಾಲ್ಲೂಕಿನಲ್ಲಿ 5, ಮೂಡಿಗೆರೆ ತಾಲ್ಲೂಕಿನಲ್ಲಿ 5, ಶೃಂಗೇರಿ ತಾಲ್ಲೂಕಿನಲ್ಲಿ 2, ನರಸಿಂಹರಾಜಪುರ ತಾಲ್ಲೂಕಿನಲ್ಲಿ 4 ಹಾಗೂ  ಕೊಪ್ಪ ತಾಲ್ಲೂಕಿನಲ್ಲಿ ಓರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಶುಕ್ರವಾರ ಪತ್ತೆಯಾದ 64 ಕೋವಿಡ್-19 ಸೋಂಕತರ ಪೈಕಿ ಕೆಲವರನ್ನು ಮನೆ ಹಾಗೂ ಜಿಲ್ಲೆಯಲ್ಲಿ ತೆರಯಲಾಗಿರುವ ಕೋವಿಡ್-19  ಕೇರ್ ಸೆಂಟರ್‍ನನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿದೆ.

ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯಕ್ಕೆ ಜಿಲ್ಲಾಡಳಿತ ಪತ್ತೆ ಮಾಡಿದೆ. ಸೋಂಕಿತರು ಪತ್ತೆಯಾದ ಸುತ್ತ ಮುತ್ತಲ ಪ್ರದೇಶವನ್ನು ನಿರ್ಬಂಧಿತವಲಯವೆಂದು ಘೋಷಿಸಿರುವ ಜಿಲ್ಲಾಡಳಿತ ಈ ಪ್ರದೇಶಗಳ ನಿರ್ವಹಣೆಗೆ ಆಯಾ ತಾಲ್ಲೂಕು ತಹಶೀಲ್ದಾರ್ ನೇಮಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ಪತ್ತೆಯಾಗಿರುವ 64 ಮಂದಿ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1367ಕ್ಕೇರಿದ್ದು, 741 ಪ್ರಕರಣಗಳು ಸಕ್ರಿಯ ವಾಗಿದೆ. ಶುಕ್ರವಾರ 21 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 578 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಸೋಂಕಿನಿಂದ ಶುಕ್ರವಾರ ಇಬ್ಬರ ಸಾವು 

ಮೂಡಿಗೆರೆ ತಾಲ್ಲೂಕಿನ 75 ವರ್ಷದ ಪುರುಷ ಹಾಗೂ ಬೀರೂರು ಪಟ್ಟಣದ 35ವರ್ಷದ ಮಹಿಳೆ ಕೋವಿಡ್-19 ಸೋಂಕಿಗೆ ಮೃತಪಟ್ಟಿದ್ದಾರೆ. 
ಇಬ್ಬರಲ್ಲೂ ಇತ್ತೀಚೆಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದು, ಇಬ್ಬರು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಸಾವನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News