ಪ್ಲಾಸ್ಟಿಕ್ ಧ್ವಜ ಬಳಸಿದರೆ ಕಠಿಣ ಕ್ರಮ: ದ.ಕ. ಡಿಸಿ

Update: 2020-08-07 16:07 GMT

ಮಂಗಳೂರು, ಆ.7:   ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಪ್ಲಾಸ್ಟಿಕ್ ಧ್ವಜ ಬಳಸಿದ್ದು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.

ಸ್ವಾತಂತ್ರೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯಾದ್ಯಂತ ಖಾದಿ ಧ್ವಜವನ್ನೇ ಬಳಕೆ ಮಾಡಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
    
ಸಾರ್ವಜನಿಕರು ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲಕರು ಮತ್ತು ಉಪಯೋಗಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News