ಸಂವಿಧಾನದಲ್ಲಿ ಮೂಲಭೂತ ಕರ್ತವ್ಯ ಕುರಿತ ವೆಬಿನಾರ್

Update: 2020-08-07 16:07 GMT

 ಮಂಗಳೂರು, ಆ.7: ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಹಾಗೂ ಬೆಸೆಂಟ್ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಭಾಗದ ಸಹಯೋಗದಲ್ಲಿ ಭಾರತೀಯ ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳ ಮಹತ್ವ ಕುರಿತ ವಿಶೇಷ ವೆಬಿನಾರ್ ಕಾರ್ಯಕ್ರಮವನ್ನು ಶುಕ್ರವಾರ ನಗರದ ಬೆಸೆಂಟ್ ಮಹಿಳಾ ಕಾಲೇಜನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಜಂಟಿನಿರ್ದೇಶಕ ಡಾ.ಅಪ್ಪಾಜಿಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತೀಯ ಸಂವಿಧಾನವು ವಿಶ್ವದ ಶ್ರೇಷ್ಠ ಸಂವಿಧಾನವಾಗಿದೆ. ಅದರಲ್ಲಿ ತಿಳಿಸಿರುವ ಮೂಲಭೂತ ಕರ್ತವ್ಯಗಳನ್ನು ಗೌರವಿಸಬೇಕು. ಜೊತೆಗೆ ಆ ಕರ್ತವ್ಯಗಳನ್ನು ಪಾಲಿಸುವುದು ಅತ್ಯಗತ್ಯ ಎಂದರು.

ಗುರುನಾನಕ್ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸತನಾಮ್ ಸಿಂಗ್ ಮಾತನಾಡಿದರು. ಪೋರ್ಟ್‌ಬ್ಲೇರ್‌ನ ಜವಾಹರ ಲಾಲ್ ರಾಜಕೀಯ ಮಹಾವಿದ್ಯಾನಿಲಯದ ಡಾ.ಶಿರಿಸ್‌ಕುಮಾರ್ ಸಂವಿಧಾನದ ಪೀಠಿಕೆ ಮತ್ತು ಹಕ್ಕುಗಳ ಬಗ್ಗೆ ತಿಳಿಸಿದರು. ಸಹಾಯಕ ಪ್ರಾಧ್ಯಪಕಿ ರವಿಪ್ರಭಾ ಮೂಲಭೂತ ಕರ್ತವ್ಯಗಳ ಬಗ್ಗೆ ವಿವರಿಸಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಅಧಿಕಾರಿ ಜಿ.ತುಕರಾಂಗೌಡ, ಸಂಯೋಜನಾಧಿಕಾರಿ ರೋಹಿತ್ ಜಿ.ಎಸ್., ಪ್ರಾಂಶುಪಾಲ ಸತೀಶ್ ಶೆಟ್ಟಿ ಮತ್ತಿತರು ಉಪಸ್ಥಿತರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News