ನೇತ್ರಾವತಿ ಸೇತುವೆಯಲ್ಲಿ ಅಪಘಾತ: ಯುವಕ ಮೃತ್ಯು

Update: 2020-08-07 16:51 GMT

ಮಂಗಳೂರು, ಆ.7: ನೇತ್ರಾವತಿ ನದಿಯ ಸೇತುವೆ ಮೇಲೆ ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಅಪಘಾತದಲ್ಲಿ ಬೈಕ್ ಸವಾರನು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News