ಸಿಎಎ ಪ್ರತಿಭಟನೆ: ಅಖಿಲ್ ಗೊಗೋಯ್‌ಗೆ ಜಾಮೀನು ನಿರಾಕರಣೆ

Update: 2020-08-07 17:15 GMT

ಗುವಾಹಟಿ, ಆ.7: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಸ್ಸಾಂನಲ್ಲಿ ಕಳೆದ ವರ್ಷ ನಡೆದಿದ್ದ ಪ್ರತಿಭಟನೆ ಸಂದರ್ಭದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಅಸ್ಸಾಂನ ಮಾಹಿತಿ ಹಕ್ಕು ಕಾರ್ಯಕರ್ತ ಅಖಿಲ್ ಗೊಗೋಯ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎನ್‌ಐಎ ಕೋರ್ಟ್ ಶುಕ್ರವಾರ ತಳ್ಳಿ ಹಾಕಿದೆ. ದಿಬ್ರುಗಢ ಜಿಲ್ಲೆಯಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಪೊಲೀಸ್ ಕಚೇರಿ, ಪೋಸ್ಟ್ ಆಫೀಸ್ ಮತ್ತು ಯುನೈಟೆಡ್ ಇಂಡಿಯಾ ಬ್ಯಾಂಕ್‌ನ ಶಾಖೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಗೊಗೋಯ್‌ಗೆ ಜುಲೈ 17ರಂದು ಜಾಮೀನು ದೊರಕಿತ್ತು. ಆದರೆ ಜೊರ್ಹಾಟ್ ಜಿಲ್ಲಾಧಿಕಾರಿ ಕಚೇರಿಯೆದುರು ನಡೆದ ಪ್ರತಿಭಟನೆಯಲ್ಲಿ 'ದೇಶದ ವಿರುದ್ಧ ಯುದ್ಧ ನಡೆಸಲು ಸಂಚು ಹೂಡಿದ ಮತ್ತು ದಂಗೆ ನಡೆಸಿದ ಆರೋಪದಲ್ಲಿ ಗೊಗೋಯ್ ವಿರುದ್ಧ ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಈ ಪ್ರಕರಣದಲ್ಲಿ ಜಾಮೀನು ನಿರಾಕರಿಸಲಾಗಿದೆ.

ಈ ಮಧ್ಯೆ, ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗೊಗೋಯ್‌ರನ್ನು ಜುಲೈ 11ರಂದು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News