ದುರಂತಕ್ಕೀಡಾದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬ್ಲ್ಯಾಕ್ ಬಾಕ್ಸ್ ವಶಕ್ಕೆ

Update: 2020-08-08 06:57 GMT

ಹೊಸದಿಲ್ಲಿ, ಆ.8: ಕೇರಳದ ಕೋಝಿಕ್ಕೋಡ್‌ನಲ್ಲಿ ಶುಕ್ರವಾರ ರಾತ್ರಿ ಅಪಘಾತಕ್ಕೀಡಾದ ಏರ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬ್ಲ್ಯಾಕ್ ಬಾಕ್ಸ್ ಅಥವಾ ಡಿಜಿಟಲ್ ಫ್ಲೈಟ್ ಡಾಟಾ ರೆಕಾರ್ಡರ್‌ಗಳು ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ.

ಕೋಝಿುಕ್ಕೋಡ್‌ನ ವಿಮಾನ ನಿಲ್ದಾಣದ ರನ್‌ವೇ ಯಲ್ಲಿ ಇಳಿಯುತ್ತಿದ್ದಾಗ ಜಾರಿ ಕಣಿವೆಗೆ ಬಿದ್ದು ಇಬ್ಭಾಗವಾಗಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ದುರಂತದಲ್ಲಿ ಕಮಾಂಡರ್ ದೀಪಕ್ ವಸಂತ್ ಸಾಥೆ ಹಾಗೂ ಕ್ಯಾಪ್ಟನ್ ಅಖಿಲೇಶ್ ಕುಮಾರ್ ಸಹಿತ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. 127 ಮಂದಿ ಗಾಯಗೊಂಡಿದ್ದಾರೆ.

ಘಟನೆಯ ಕುರಿತು ತನಿಖೆಗೆ ಆದೇಶಿಸಿರುವ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಮಧ್ಯಾಹ್ನ ಕೋಝಿಕ್ಕೋಡ್‌ಗೆ ಆಗಮಿಸಲಿದ್ದಾರೆ. ವಾಯುಯಾನದ ವಾಚ್‌ಡಾಗ್ ಡಿಜಿಸಿಎ (ಡೈರಕ್ಟರ್ ಜನರಲ್ ಆಫ್ ಸಿವಿಲ್‌ಏವಿಯೇಶನ್)ಈಗಾಗಲೇ ಅಪಘಾತದ ಸ್ಥಳವನ್ನು ತಲುಪಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News