ಗೈರು ಹಾಜರಾಗಿರುವ ಕೋವಿಡ್ ಯೋಧರು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಾನೂನು ಕ್ರಮ: ಡಿಸಿಎಂ ಎಚ್ಚರಿಕೆ

Update: 2020-08-08 09:38 GMT

ಬೆಂಗಳೂರು, ಆ.8: ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ವೈರಾಣುವನ್ನು ಹತ್ತಿಕ್ಕಲು ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಪಾತ್ರ ದೊಡ್ಡದು. ಹೀಗಾಗಿ ಕರ್ತವ್ಯಕ್ಕೆ ಗೈರು ಹಾಜರಾಗಿರುವವರು ಕೂಡಲೇ ಹಾಜರಾಗಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವೇ ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಹೀಗೆ ಕರ್ತವ್ಯದಿಂದ ಪಲಾಯನ ಮಾಡುವುದು ಸರಿಯಲ್ಲ. ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೊರೋನ ಯೋಧರಾಗಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರೂ ತಮಗೆ ವಹಿಸಿರುವ ಕೆಲಸವನ್ನು ಮಾಡಲೇಬೇಕು. ಅವರಿಗೆ ಅಗತ್ಯವಾಗಿ ಬೇಕಿರುವ ಎಲ್ಲ ಸುರಕ್ಷತಾ ಸಾಧನಗಳನ್ನು ಈಗಾಗಲೇ ಸರಕಾರ ಒದಗಿಸಿದೆ. ಜತೆಗೆ ಕೋವಿಡ್ ಭತ್ತೆ, ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸರಕಾರದ ಕೆಲಸ ದೇವರ ಕೆಲಸ ಎನ್ನುವುದು ನಮ್ಮ ಧ್ಯೇಯವಾಕ್ಯ. ಇದಕ್ಕೆ ಮನ್ನಣೆ ಕೊಟ್ಟು ಕೂಡಲೇ ಗೈರಾದವರೆಲ್ಲರೂ ಕೆಲಸಕ್ಕೆ ಹಾಜರಾಗಬೇಕು. ತಪ್ಪಿದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News