ಕೋಝಿಕ್ಕೋಡ್ ವಿಮಾನ ದುರಂತ

Update: 2020-08-08 12:09 GMT

ದುಬೈಯಿಂದ ಹಿಂದಿರುಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೋಝಿಕ್ಕೋಡ್‌ನಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ (ಕರಿಪುರ ವಿಮಾನ ನಿಲ್ದಾಣ)ದಲ್ಲಿ ಶುಕ್ರವಾರ ಸಂಜೆ ಇಳಿಯುವಾಗ ರನ್‌ವೇಯಲ್ಲಿ ಜಾರಿ ಕಣಿವೆಗೆ ಉರುಳಿ ಸಂಭವಿಸಿದ ದುರಂತದಲ್ಲಿ ಪೈಲಟ್, ಸಹ ಪೈಲಟ್ ಹಾಗೂ 16 ಪ್ರಯಾಣಿಕರು ಸೇರಿದಂತೆ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ. 15 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇತರ 123 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ರಾತ್ರಿ 8.15ರ ಹೊತ್ತಿಗೆ ಕೋಝಿಕ್ಕೋಡ್ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಇಳಿಯುತ್ತಿದ್ದಂತೆ ಜಾರಿ ತಡೆಗೋಡೆಗೆ ಢಿಕ್ಕಿ ಹೊಡೆಯಿತು. ಆನಂತರ 35 ಅಡಿ ಆಳದ ಕಣಿವೆಗೆ ಉರುಳಿತು. ಇದರಿಂದ ವಿಮಾನ ಎರಡು ತುಂಡುಗಳಾಯಿತು ಎಂದು ನಾಗರಿಕ ವಿಮಾನ ಯಾನದ ಪ್ರಧಾನ ನಿರ್ದೇಶನಾಲಯ (ಡಿಜಿಸಿಎ) ನೀಡಿದ ಹೇಳಿಕೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor