ರೈತ ಕಾರ್ಮಿಕರ ರಾಷ್ಟ್ರವ್ಯಾಪಿ ಹೋರಾಟಕ್ಕೆ ಜನವಾದಿ ಮಹಿಳಾ ಸಂಘಟನೆ: ಪ್ರಧಾನ ಕಾರ್ಯದರ್ಶಿ ಗೌರಮ್ಮ

Update: 2020-08-08 12:40 GMT

ಬೆಂಗಳೂರು, ಆ.8: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ, ರೈತ ಕಾರ್ಮಿಕರು ಕರೆ ನೀಡಿರುವ ರಾಷ್ಟ್ರವ್ಯಾಪಿ ಹೋರಾಟಕ್ಕೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬೆಂಬಲ ಘೋಷಿಸಿದ್ದು, ಈ ಹೋರಾಟದಲ್ಲಿ ತಮ್ಮ ಸಂಘಟನೆಯ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಿದ್ದಾರೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೌರಮ್ಮ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ನೀತಿಗಳಿಂದಾಗಿ ಬಹುಸಂಖ್ಯೆಯ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಲಿಯಾಗಿದ್ದಾರೆ. ನಮ್ಮ ಸಂಘಟನೆಯ ಸದಸ್ಯರಾಗಿರುವ ಅಸಂಘಟಿತ ಕ್ಷೇತ್ರದಲ್ಲಿ ದುಡಿಯುವ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ, ನಗರ ಉದ್ಯೋಗ ಖಾತರಿ ಯೋಜನೆಯ ಜಾರಿಗೊಳಿಸಬೇಕೆನ್ನುವುದು ಜನವಾದಿ ಮಹಿಳಾ ಸಂಘಟನೆಯ ಒತ್ತಾಯವಾಗಿದೆ ಎಂದು ಅವರು ಹೇಳಿದ್ದಾರೆ.

ಅದೇ ರೀತಿ, ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತರಿ ಯೋಜನೆ ಕನಿಷ್ಠ 200 ದಿನಗಳ ಕೆಲಸ, ಕನಿಷ್ಠ ಕೂಲಿ ಹೆಚ್ಚಳ. ಆಹಾರ ಭದ್ರತೆ. ಜತೆಗೆ ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಪ್ರತಿಯೊಬ್ಬರಿಗೆ 7500 ರೂ.ಗಳನ್ನು ಕನಿಷ್ಠ ಆರು ತಿಂಗಳು ಖಾತೆಗೆ ಜಮೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಒತ್ತಾಯಿಸಲಾಗಿದೆ ಎಂದು ಗೌರಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News