ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯನ್ನು ನಿಷೇಧಿಸಲು ಪ್ರಮೋದ್ ಮುತಾಲಿಕ್ ಒತ್ತಾಯ

Update: 2020-08-08 12:51 GMT

ವಿಜಯಪುರ, ಆ.8: ಅಯೋಧ್ಯೆಯ ರಾಮಮಂದಿರ ವಿಷಯದಲ್ಲಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯನ್ನು ನಿಷೇಧಿಸಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರವನ್ನು ಕೆಡವಿ ಅದೇ ಜಾಗದಲ್ಲಿ ಬಾಬರಿ ಮಸೀದಿ ನಿರ್ಮಿಸುತ್ತೇವೆಂದು ಹೇಳಿಕೆ ನೀಡಿರುವ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ವಿರುದ್ಧ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಪಾಲಿಸದವರು ನಾಲಾಯಕ್‍ಗಳು. ಅವರು ಪಾಕಿಸ್ತಾನಕ್ಕೆ ಹೋಗಲಿ, ಇಲ್ಲವೇ ಸರಕಾರವೇ ಅವರನ್ನು ಪಾಕಿಸ್ತಾನಕ್ಕೆ ಅಟ್ಟಲಿ ಎಂದು ತಿಳಿಸಿದ್ದಾರೆ. ಈ ವೇಳೆ ಶ್ರೀರಾಮ ಸೇನೆಯ ಮುಖಂಡರಾದ ನೀಲಕಂಠ ಕಂದಗಲ್, ಗಂಗಾಧರ ಕುಲಕರ್ಣಿ, ಆನಂದ ಕುಲಕರ್ಣಿ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News