ಉದ್ಯಾವರ: ಮನೆ ಮನೆಗಳಲ್ಲಿ ವನಮಹೋತ್ಸವ ಆಚರಣೆ

Update: 2020-08-08 16:02 GMT

ಉಡುಪಿ, ಆ.8: ‘ಪರಿಸರವನ್ನು ಉಳಿಸೋಣ, ಪರಿಸರವನ್ನು ಬೆಳೆಸೋಣ’ ಧ್ಯೇಯ ವಾಕ್ಯದೊಂದಿಗೆ ಭಾರತೀಯ ಕಥೊಲಿಕ್ ಯುವ ಸಂಚಲನ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ ಕಥೋಲಿಕ್ ಸಭಾ ಉದ್ಯಾವರ ಘಟಕದ ಸಹಕಾರದೊಂದಿಗೆ ದೇವಾಲಯದ ವ್ಯಾಪ್ತಿಯ ಪ್ರತಿ ಮನೆ ಮನೆಯಲ್ಲೂ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ, ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅತಿ ವಂ.ಸ್ಟ್ಯಾನಿ ಬಿ.ಲೋಬೊ, ಸಹಾಯಕ ಧರ್ಮಗುರು ವಂ.ರೊಲ್ವಿನ್ ಅರಾನ್ನರ ಜೊತೆಗೂಡಿ ದೇವಾ ಲಯದ ವಠಾರದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದೇವಾಲಯದ ವ್ಯಾಪ್ತಿಯಲ್ಲಿ 540 ಮನೆಗಳಲ್ಲಿ ಮಾತ್ರವಲ್ಲದೆ, ಬೆಂಗಳೂರು, ಮುಂಬೈ, ಅರಬ್ ಸಹಿತ ವಿವಿಧ ರಾಷ್ಟ್ರಗಳಲ್ಲಿ ನೆಲೆಸಿರುವ ಉದ್ಯಾವರದ ಕ್ರೈಸ್ತ ಕುಟುಂಬಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮದಲ್ಲಿ ಜೊತೆಯಾದರು.

 ಈ ಸಂದರ್ಭದಲ್ಲಿ ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ನ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಮೈಕಲ್ ಡಿಸೋಜ, ಐಸಿವೈಎಂ ಅಧ್ಯಕ್ಷ ರೊಯಲ್ ಕಾಸ್ತೆಲಿನೋ, ಪ್ರಮುಖರಾದ ರೊನಾಲ್ಡ್ ಡಿಸೋಜ, ಆಲ್ವಿನ್ ಅಂದ್ರಾದೆ, ವಿಲ್ಫ್ರೆಡ್ ಡಿಸೋಜ, ಜೆರಾಲ್ಡ್ ಪಿರೇರ, ಜೂಲಿಯಾ ಡಿಸೋಜಾ, ಗಾಡ್ಫ್ರಿ ಡಿಸೋಜ, ರೊಯ್ಸ್ ಫೆರ್ನಾಂಡಿಸ್, ಜೊನ್ ಗೋಮ್ಸ್, ಜೋಸೆಫ್ ಕುಲಾಸೊ, ಎರೋಲ್ ಗೊನ್ಸಾಲ್ವಿಸ್, ಜೂದ್ ನೆಲ್ಸನ್, ಪ್ರೇಮ್ ಮಿನೇಜಸ್ ಉಪಸ್ಥಿತರಿದ್ದರು.

ಕೆಥೋಲಿಕ್ ಸಭಾ ಉದ್ಯಾವರ ಘಟಕದ ಅಧ್ಯಕ್ಷ ಲಾರೆನ್ಸ್ ಡೇಸಾ ಸ್ವಾಗತಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಡೊರ ಆರೋಜ ವಂದಿಸಿದರು. ಕಾರ್ಯಕ್ರಮಗಳ ಸಂಚಾಲಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News