ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ

Update: 2020-08-08 16:43 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.8: ರಾಜ್ಯದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಕೆ. ಸತಿದೇವಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.9ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್‍ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.13ರವರೆಗೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 4.6 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಹಾಸನ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News