ಅಕ್ರಮವಾಗಿ ಸಾಗಿಸುತ್ತಿದ್ದ 100 ಕ್ವಿಂಟಾಲ್ ಅಕ್ಕಿ ಜಪ್ತಿ

Update: 2020-08-08 17:58 GMT

ಬೀದರ್, ಆ.8: ಇಲ್ಲಿನ ಬಸವಕಲ್ಯಾಣ ತಾಲೂಕಿನ ಉಜಳಂಬದಲ್ಲಿ ಮಹಾರಾಷ್ಟ್ರ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 100 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆಯ ಉಮರ್ಗಾಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಲಾರಿಯಲ್ಲಿ 2.70 ಲಕ್ಷ ಮೌಲ್ಯದ 200 ಚೀಲ ಅಕ್ಕಿ ಇತ್ತು. ಈ ವೇಳೆ ಕಾರ್ಯಾಚರಣೆ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು ಲಾರಿ ಸಮೇತ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News