ಅಫ್ಘಾನಿಸ್ತಾನ ವಿರುದ್ಧದ ಟ್ವೆಂಟಿ-20 ಸರಣಿ ರದ್ದು ಪಡಿಸಿದ ಝಿಂಬಾಬ್ವೆ

Update: 2020-08-09 08:03 GMT

ಹರಾರೆ(ಝಿಂಬಾಬ್ವೆ): ಕೊರೋನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಐದು ಪಂದ್ಯಗಳ ಟ್ವೆಂಟಿ-20 ಸರಣಿಯನ್ನು ರದ್ದುಪಡಿಸಲಾಗಿದೆ ಎಂದು ಝಿಂಬಾಬ್ವೆ ಕ್ರಿಕೆಟ್ ಶನಿವಾರ ದೃಢಪಡಿಸಿದೆ.

ಐದು ಪಂದ್ಯಗಳ ಸರಣಿಯನ್ನು ಆಗಸ್ಟ್‌ನಲ್ಲಿ ಆಡಬೇಕಾಗಿತ್ತು. ಆದರೆ, ಸರಕಾರದ ಸಲಹೆಯಂತೆ ಸರಣಿಯನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ. ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಪ್ರವಾಸಿ ತಂಡಗಳ ಆತಿಥ್ಯವನ್ನು ವಹಿಸಲು ದೇಶ ಇನ್ನೂ ಸಿದ್ಧವಾಗಿಲ್ಲ ಎಂದು ಸರಕಾರ ತಿಳಿಸಿದೆ ಎಂದು ಝಿಂಬಾಬ್ವೆ ಕ್ರಿಕೆಟ್ ಟ್ವೀಟ್ ಮಾಡಿದೆ.

ಝಿಂಬಾಬ್ವೆ ಈ ವರ್ಷಾರಂಭದಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿ ಏಕದಿನ ಹಾಗೂ ಟ್ವೆಂಟಿ-20 ಸರಣಿಗಳನ್ನು ಆಡಿತ್ತು. ಮತ್ತೊಂದೆಡೆ ಈ ವರ್ಷದ ಮಾರ್ಚ್‌ನಲ್ಲಿ ಅಫ್ಘಾನಿಸ್ತಾನ ತಂಡ

ಐರ್‌ಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯನ್ನು ಆಡಿತ್ತು. ಅಫ್ಘಾನಿಸ್ತಾನ ನವೆಂಬರ್‌ನಲ್ಲಿ ಪರ್ತ್‌ನಲ್ಲಿ ಏಕೈಕ ಟೆಸ್ಟ್ ಪಂದ್ಯವನ್ನಾಡಲು ಆಸ್ಟ್ರೇಲಿಯಕ್ಕೆ ಪ್ರವಾಸ ಕೈಗೊಳ್ಳುವ ನಿರೀಕ್ಷೆಯಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News