ಗದಗ ಜಿಲ್ಲಾಧಿಕಾರಿಯ ಪತ್ನಿಗೆ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ

Update: 2020-08-09 14:01 GMT
ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು

ಗದಗ, ಆ.9: ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅವರ ಪತ್ನಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ನಗರದ ಕೆ.ಸಿ. ರಾಣಿ ರಸ್ತೆಯಲ್ಲಿರುವ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿಯ ಪತ್ನಿಗೆ ಹೆರಿಗೆಯಾಗಿದೆ. 

ಶನಿವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುಂದರೇಶ್‌ ಬಾಬು ಅವರ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಎಚ್‌.ಕೆ ಪಾಟೀಲ್ ಅವರು ಟ್ವೀಟ್ ಮೂಲಕ ಜಿಲ್ಲಾಧಿಕಾರಿಗಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಅವರ ಧರ್ಮಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನನ, ಸಂತೋಷದ ಸಂಗತಿ. ಅವರ ಸರಳ ನಡೆಗೆ ಅಭಿನಂದನೆಗಳು" ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News