ಸೋಮವಾರ ಮಧ್ಯಾಹ್ನ ಎಸೆಸೆಲ್ಸಿ ಫಲಿತಾಂಶ ಪ್ರಕಟ

Update: 2020-08-09 14:07 GMT

ಬೆಂಗಳೂರು, ಆ.9: ಜೂನ್-ಜುಲೈನಲ್ಲಿ ನಡೆದ ಎಸೆಸೆಲ್ಸಿ ಫಲಿತಾಂಶವು ಸೋಮವಾರ ಮಧ್ಯಾಹ್ನ 3 ಗಂಟೆಯ ಬಳಿಕ ಪ್ರಕಟಗೊಳ್ಳಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವಿಂದು ನಿರ್ಧಾರವಾಗಲಿದೆ.

ರಾಜ್ಯಾದ್ಯಂತ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆತಂಕದ ನಡುವೆಯೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೀಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ

220 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆದಿತ್ತು. ಕೊರೋನ ಹಿನ್ನೆಲೆ ಫಲಿತಾಂಶವನ್ನು ವಿದ್ಯಾರ್ಥಿಗಳ ಅಥವಾ ಪೋಷಕರ ಮೊಬೈಲ್‍ಗೆ ಕಳಿಸಿಕೊಡಲಾಗುತ್ತದೆ. ಅಲ್ಲದೆ, ಎಸೆಸೆಲ್ಸಿ ಬೋರ್ಡ್ ಅಧಿಕೃತ ವೆಬ್‍ಸೈಟ್ www.sslc.kar.nic.in ಹಾಗೂ karresults.nic.in ನಲ್ಲಿ ಕೂಡ ಫಲಿತಾಂಶ ಪಡೆಯಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News