ಪಿಎಂ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರಿಗೆ ನೆರವು: ಸಿಎಂ ಯಡಿಯೂರಪ್ಪ

Update: 2020-08-09 14:51 GMT

ಬೆಂಗಳೂರು, ಆ. 9: 'ಪ್ರಧಾನಮಂತ್ರಿ (ಪಿಎಂ) ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1,049 ಕೋಟಿ ರೂಪಾಯಿಗಳನ್ನು ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದ ರೈತರ ಪರವಾಗಿ ಪ್ರಧಾನಿ ಮೋದಿಯವರಿಗೆ ನನ್ನ ಧನ್ಯವಾದ ಸಲ್ಲಿಸುತ್ತೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ಅವರು, ರಾಜ್ಯದ ರೈತರಿಗೆ ಆರ್ಥಿಕ ಭದ್ರತೆ ಕಲ್ಪಿಸುವ ಮೊತ್ತೊಂದು ಹೆಜ್ಜೆಯಾಗಿ ಇಂದು ಕೃಷಿ ಮೂಲಸೌಕರ್ಯ ನಿಧಿಯಿಂದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಪ್ರಧಾನಿ ಮೋದಿಯವರು ಆನ್‍ಲೈನ್ ಮೂಲಕ ರೈತರಿಗೆ ನೆರವು ಬಿಡುಗಡೆ ಮಾಡಲಿದ್ದಾರೆ. ಕೃಷಿ ಮೂಲಸೌಕರ್ಯ ನಿಧಿಯಡಿಯಲ್ಲಿ 1 ಲಕ್ಷ ಕೋಟಿ ರೂ. ಹಣಕಾಸು ಸೌಲಭ್ಯ ಒದಗಿಸಲಾಗಿದೆ' ಎಂದು ತಿಳಿಸಿದ್ದಾರೆ

`ಪ್ರಧಾನ ಮಂತ್ರಿ(ಪಿಎಂ) ಕಿಸಾನ್ ಯೋಜನೆಯಡಿ ದೇಶದ 8.5 ಕೋಟಿ ರೈತರಿಗೆ ಆರನೇ ಕಂತಿನ 17 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ಆರ್ಥಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿದೆ. `ಆತ್ಮನಿರ್ಭರ ಕೃಷಿ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿರಿಯರು, ವೀರಶೈವ ಮಹಾಸಭಾ ಅಧ್ಯಕ್ಷರು, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಮತ್ತು ಅವರ ಪುತ್ರ ಎಸ್.ಎನ್. ಮಲ್ಲಿಕಾರ್ಜುನ ಅವರು ಕೊರೋನ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಪೂರ್ಣ ಚೇತರಿಸಿಕೊಂಡು ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ನಿರತರಾಗಲಿ ಎಂದು ಹಾರೈಸುತ್ತೇನೆ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News