ನನ್ನ ಸ್ವಾತಂತ್ರ್ಯ ಹೋರಾಟದ ಬಗ್ಗೆ ಬಿಜೆಪಿ ನಾಯಕರ ತೇಜೋವಧೆಯಿಂದ ನೊಂದಿದ್ದೇನೆ: ದೊರೆಸ್ವಾಮಿ

Update: 2020-08-09 15:53 GMT

ಬೆಂಗಳೂರು, ಆ.9: ನನ್ನ ಸ್ವಾತಂತ್ರ್ಯ ಹೋರಾಟ ಹಾಗೂ ಆ ನಂತರದ ಜನಪರ ಹೋರಾಟಗಳ ಬಗ್ಗೆ ಬಿಜೆಪಿ ನಾಯಕರು ತೇಜೋವಧೆ ಮಾಡಿದ್ದಾರೆ. ಇದರಿಂದ ನಾನು ಸಾಕಷ್ಟು ನೊಂದಿದ್ದೇನೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಶನಿವಾರ ಕ್ವಿಟ್‍ ಇಂಡಿಯಾ ಚಳವಳಿಯ ಸ್ಮರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ರಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಬಿಜೆಪಿ ನಾಯಕರು ನನ್ನನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಕರೆದಿದ್ದಾರೆ. ನನ್ನ ವಿರುದ್ಧ ಪ್ರತಿಭಟನೆಯನ್ನೂ ಮಾಡಿದ್ದಾರೆ ಎಂದು ವಿಷಾದಿಸಿದರು.

ನನ್ನ ಇಡೀ ಬದುಕನ್ನು ಸಮಾಜಕ್ಕೆ ಮೀಸಲಿಟ್ಟ ಪರಿಣಾಮ ಬಿಜೆಪಿ ನಾಯಕರಿಂದ ತೇಜೋವಧೆ ಮಾತುಗಳನ್ನು ಕೇಳಬೇಕಾಗಿ ಬಂತು. ನನ್ನ ಪ್ರಾಮಾಣಿಕ ಹೋರಾಟಗಳು ಅವರ ಅರಿವಿಗೆ ಬಂದೇ ಇಲ್ಲವೆ ? ಅಥವಾ ಗೊತ್ತಿದ್ದೂ ಜನರನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಇಂದು ರಾಷ್ಟ್ರಪತಿಗಳು ನಾನು ಪ್ರಾಮಾಣಿಕ ಸ್ವಾತಂತ್ರ್ಯ ಹೋರಾಟಗಾರ ಎಂದು ಪರಿಗಣಿಸಿ ತಹಶೀಲ್ದಾರ್ ಮೂಲಕ ಗೌರವ ಸಮರ್ಪಣೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಹಾಗೂ ಎಲ್ಲ ಸಿಬ್ಬಂದಿಗಳಿಗೂ ಧನ್ಯವಾದಗಳು.

-ಎಚ್.ಎಸ್.ದೊರೆಸ್ವಾಮಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News