ಎಸೆಸೆಲ್ಸಿ: ಪ್ರತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ.ಬಹುಮಾನ

Update: 2020-08-09 18:43 GMT

ಬೆಂಗಳೂರು, ಆ.9: ಪ್ರತಿ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಂದು ಲಕ್ಷ ರೂ.ನಗದು ಬಹುಮಾನ ನೀಡಲಾಗುತ್ತಿದೆ.

ಈ ಕುರಿತಂತೆ ಇಲಾಖೆಯ ಕಾರ್ಯದರ್ಶಿ ಕೆ.ಸಿ.ಕುಮಾರ ನಡುವಳಿಕೆ ಹೊರಡಿಸಿದ್ದು, ದೇಶದ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಈ ಬಹುಮಾನ ನೀಡಲಾಗುತ್ತಿದೆ.

ಇದಕ್ಕಾಗಿ ರಾಜ್ಯ ಸರಕಾರ 2020-21ನೇ ಸಾಲಿನ ಬಜೆಟ್‍ನಲ್ಲಿ 60 ಲಕ್ಷ ರೂ.ವನ್ನು ನಿಗದಿ ಪಡಿಸಲಾಗಿದೆ. ಈ ಸೌಲಭ್ಯವನ್ನು ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News