ಆ.13ರವರೆಗೆ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

Update: 2020-08-09 18:57 GMT

ಬೆಂಗಳೂರು, ಆ.9: ಉತ್ತರ ಒಳನಾಡಿನಲ್ಲಿ ಆ.9ರಿಂದ 13 ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹೊನ್ನಾವರದಲ್ಲಿ 14 ಸೆಂ.ಮೀ ಹಾಗೂ ಕುಂದಾಪುರದಲ್ಲಿ 11 ಸೆಂ.ಮೀ ಮಳೆಯಾಗಿದೆ. ಕೊಡಗಿನಲ್ಲಿ 17 ಸೆಂ.ಮೀ. ಹಾಗೂ ಆಗುಂಬೆಯಲ್ಲಿ 9 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಆ.9 ರಿಂದ 13ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆ.9ರಂದು ರೆಡ್‍ ಅಲರ್ಟ್ ಘೋಷಿಸಲಾಗಿದೆ. ಹಾಗೆ ಉತ್ತರಕನ್ನಡ ಜಿಲ್ಲೆಯಲ್ಲೂ ಅರೆಂಜ್‍ಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ ಬೆಂಗಳೂರಿನಲ್ಲೂ ಆ. 10ರಂದು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News