ಉಡುಪಿ : ಆಸ್ಪತ್ರೆಯ ಎದುರಿನ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆ

Update: 2020-08-10 07:16 GMT

ಉಡುಪಿ : ಕೂಸಮ್ಮ ಶಂಭು ಶೆಟ್ಟಿ ಮತ್ತು ಹಾಜಿ ಅಬ್ದುಲ್ಲಾ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರಿನ ಕಸದ ತೊಟ್ಟಿ ಯಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ.

ಬೆಳಗ್ಗೆ ನಗರ ಸಭೆಯ ಸ್ವಚ್ಚತಾ ಸಿಬ್ಬಂದಿ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಆಸ್ಪತ್ರೆಯ ಎದುರಿನ ಹೊಟೇಲ್ ಬಳಿಯ ತ್ಯಾಜ್ಯದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಕಂಡುಬಂದಿದೆ. ಬಳಿಕ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ನೆರವಿನೊಂದಿಗೆ ಮಗುವನ್ನು ಆಸ್ಪತ್ರೆಗೆ ನೀಡಲಾಯಿತು. ಸದ್ಯ ಮಗು 1200 ಗ್ರಾಮ್ ತೂಕವಿದ್ದು, ಎನ್ ಐಸಿಯು ನಲ್ಲಿಟ್ಟು ಶುಶ್ರೂಶೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News