ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ಕೊರೋನ ವೈರಸ್ ದೃಢ

Update: 2020-08-10 17:57 GMT

ಹೊಸದಿಲ್ಲಿ, ಆ.10: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೋನ ಸೋಂಕು ದೃಢಪಟ್ಟಿದ್ದು ಈ ವಿಷಯವನ್ನು ಮುಖರ್ಜಿ ಖುದ್ದು ಟ್ವೀಟ್ ಮಾಡಿ ತಿಳಿಸಿದ್ದಾರೆ.

“ಇವತ್ತು ನಿಯಮಿತ ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಕೊರೋನ ಸೋಂಕು ಪರೀಕ್ಷೆ ಪಾಸಿಟಿವ್ ಬಂದಿದೆ. ಆದ್ದರಿಂದ ಕಳೆದ ವಾರ ತನ್ನೊಂದಿಗೆ ಸಂಪರ್ಕದಲ್ಲಿದ್ದವರು ಮುನ್ನೆಚ್ಚರಿಕೆ ವಹಿಸಿ ಸ್ವಯಂ ಕ್ವಾರಂಟೈನ್‌ಗೆ ಒಳಪಡುವುದಲ್ಲದೆ ಕೊರೋನ ಸೋಂಕು ಪರೀಕ್ಷೆ ನಡೆಸಬೇಕು” ಎಂದು 84 ವರ್ಷದ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

ಪ್ರಣಬ್ ಮುಖರ್ಜಿ 2012ರಿಂದ 2017ರವರೆಗೆ ದೇಶದ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ್ದರು. ಮುಖರ್ಜಿ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಅವರ ಆರೋಗ್ಯ ಶೀಘ್ರ ಚೇತರಿಕೆಯಾಗಲಿ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದಿಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಜಯ್ ಮಾಕನ್, ಕೇಂದ್ರ ಸಚಿವ ಪಿಯೂಷ್ ಗೋಯಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸಹಿತ ಹಲವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News