ಎಸ್‌ಎಸ್‌ಎಲ್‌ಸಿ ಫಲಿತಾಂಶ : ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ, ಬೆಂಗಳೂರು ಗ್ರಾಮಾಂತರ ದ್ವಿತೀಯ

Update: 2020-08-10 10:40 GMT
ಅನುಷ್

ಬೆಂಗಳೂರು : ಜೂನ್-ಜುಲೈನಲ್ಲಿ ನಡೆದ ಎಸೆಸೆಲ್ಸಿ ಫಲಿತಾಂಶವು ಸೋಮವಾರ ಮಧ್ಯಾಹ್ನ ಪ್ರಕಟಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದ್ವಿತಿಯ ಹಾಗು ಯಾದರಿಗಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಉಡುಪಿ 7ನೆ ಸ್ಥಾನ ಹಾಗು ದ.ಕ. ಜಿಲ್ಲೆ 12ನೆ ಸ್ಥಾನ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಪೈಕಿ 5,82,316 ಮಂದಿ ಉತ್ತೀರ್ಣರಾಗಿದ್ದು, 2,28,734 ಅನುತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಶೇ.71.80 ಫಲಿತಾಂಶ ಬಂದಿದೆ. ಒಟ್ಟು 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿತ್ತು.

ಈ ಬಾರಿ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಸುಳ್ಯ ತಾಲೂಕು ಸುಬ್ರಹ್ಮಣ್ಯ ವಿದ್ಯಾನಗರದ ಕುಮಾರಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 625ರಲ್ಲಿ 625 ಅಂಕ ಪಡೆದಿದ್ದು, ಒಟ್ಟು 6 ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ.

52,219 ಮೌಲ್ಯಮಾಪಕರು 8 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಜುಲೈ 13ರಿಂದ ಮೌಲ್ಯಮಾಪನ ಪ್ರ‌ಕ್ರಿಯೆ ಆರಂಭವಾಗಿತ್ತು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಇದ್ದ ಕಾರಣ ಎರಡು ದಿನ ತಡವಾಗಿ ಮೌಲ್ಯಮಾಪನ ಆರಂಭವಾಗಿತ್ತು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರು ತಿಳಿಸಿದ್ದಾರೆ.

ಎಸೆಸೆಲ್ಸಿ ಬೋರ್ಡ್ ಅಧಿಕೃತ ವೆಬ್‍ಸೈಟ್ www.sslc.kar.nic.in ಹಾಗೂ karresults.nic.in ನಲ್ಲಿ ಕೂಡ ಫಲಿತಾಂಶ ಪಡೆಯಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News